ಶನಿವಾರಸಂತೆ, ಏ. 13: ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಜೆ.ಸಿ. ಸಿದ್ಧಮಲ್ಲಯ್ಯ (100) ಅವರು ತಮ್ಮ ಜನ್ಮ ಶತಮಾನೋತ್ಸವ ಆಚರಿಸಿಕೊಂಡರು.
ಸಿದ್ಧಮಲ್ಲಯ್ಯ ಅವರು ವೀರಾಜಪೇಟೆಯ ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ತಂದೆ. ಸ್ವಾಮೀಜಿಯವರು ತಂದೆಯ ಶತಮಾನೋತ್ಸವದಲ್ಲಿ ಭಾಗಿಯಾಗಿದ್ದರು. ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿಯವರು ಹಾಜರಿದ್ದರು.
ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಅಧಿಕಾರಿ ಜೆ.ಎಸ್. ವಿರೂಪಾಕ್ಷಯ್ಯ ಅವರು ಸಿದ್ಧಮಲ್ಲಯ್ಯ ಅವರ ಹಿರಿಯ ಪುತ್ರರಾಗಿದ್ದಾರೆ.