ವೀರಾಜಪೇಟೆ, ಏ. 12: ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಎ.ಕೆ. ಅನಿತಾ ಕಾರ್ಯಪ್ಪ ನಕಲಿ ಅಂಕಪಟ್ಟಿ ನೀಡಿ ನೌಕರಿ ಪಡೆದಿದ್ದಾರೆ ಎಂಬ ಪ್ರಕರಣದಲ್ಲಿ ಪೊನ್ನಂಪೇಟೆ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಅನಿತಾರಿಗೆ ಸಜಾ ಶಿಕ್ಷೆ ಮತ್ತು ದಂಡ ವಿಧಿಸಲಾಗಿತ್ತು.

ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಅನಿತ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವೀರಾಜಪೇಟೆಯಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಪರ ವಾದವನ್ನು ಪುರಸ್ಕರಿಸಿ ನ್ಯಾಯಾಧೀಶೆ ಬಿ.ಜಿ.ರಮಾ, ಜೆ.ಎಂ.ಎಫ್.ಸಿ. ನ್ಯಾಯಾಲಯದ ಆದೇಶಕ್ಕೆ ಇಂದು ತಡೆಯಾಜ್ಞೆ ನೀಡಿದ್ದಾರೆ. ಆರೋಪಿ ಅನಿತ ಪರ ವಕೀಲ ಎಸ್.ವಿ.ಸುರೇಶ್ ವಾದಿಸಿದ್ದರು.