ಸೋಮವಾರಪೇಟೆ, ಏ.12: ತಾಲೂಕು ಆಡಳಿತದ ವತಿಯಿಂದ ತಾ. 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಅಂದು ಪೂರ್ವಾಹ್ನ 10.30ಕ್ಕೆ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.