ಚೆಟ್ಟಳ್ಳಿ, ಏ. 12: ಲೋಕಸಭಾ ಚುನಾಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪ್ರತಾಪ ಸಿಂಹ ಗೆಲವಿಗಾಗಿ ಚೆಟ್ಟಳ್ಳಿಯಲ್ಲಿ ಜನಪರ ಹೋರಾಟ ಸಮಿತಿಯ ಸಂಚಾಲಕ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಸ್ಥಾನೀಯ ಸಮಿತಿ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ ಹಾಗೂ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚಿಸಿದರು.