ಮಡಿಕೇರಿ, ಏ. 12: ಮಡಿಕೇರಿ ಹೈಟೆಕ್ ಮಾರುಕಟ್ಟೆಯಲ್ಲಿ ಸಂತೆ ವ್ಯಾಪಾರಿಗಳಿಗೆ ವಿಧಿಸಲಾಗುತ್ತಿರುವ ಸುಂಕವನ್ನು ಏಕಾಏಕಿ ಏರಿಕೆ ಮಾಡಿರುವದನ್ನು ವಿರೋಧಿಸಿ ಮಾರುಕಟ್ಟೆ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿಂದು ಸಂತೆ ವ್ಯಾಪಾರಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ನಗರ ಠಾಣಾಧಿಕಾರಿ ಷಣ್ಮುಗಂ ಸಿಬ್ಬಂದಿಗಳೊಂದಿಗೆ ಆಗಮಿಸಿ, ಸಮಾಧಾನಪಡಿಸಿ, ಪರಿಸ್ಥಿತಿ ತಿಳಿಗೊಳಿಸಿದರು.