ಮಡಿಕೇರಿ, ಏ. 14: ವಿದ್ಯಾರ್ಥಿ ಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಬೇರೂರಿರುವ ಕಂದಾಚಾರ, ಮೌಢ್ಯಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಸಮಾರೋಪ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವೈ. ಚಿತ್ರಾ ಮಾತನಾಡಿ, ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಂಡು ಉತ್ತಮ ಗುರಿ ಸಾಧಿಸಲು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನ ಕೈಗೊಳ್ಳಬೇಕು ಎಂದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಆರ್. ಶಶಿಧರ್, ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅನುಪಮ ಸಭಾಪತಿ ಐಕ್ಯೂಎಸಿ ಚಟುವಟಿಕೆಗಳ ಕುರಿತು ವರದಿ ಮಂಡಿಸಿದರು.
ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಬಹುಮಾನ ವಿತರಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಎಂ.ಎನ್. ಪ್ರಕಾಶ್, ರಾಘವೇಂದ್ರ, ಡಾ. ಮುತ್ತಮ್ಮ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಡಿ.ಎಂ. ಪೃಥ್ವಿ, ಕಾರ್ಯದರ್ಶಿ ಎ. ಸುಭಾಷ್, ಜಂಟಿ ಕಾರ್ಯದರ್ಶಿ ಆರ್.ಸಿ. ರೂಪಿಣಿ, ಸಾಂಸ್ಕøತಿಕ ಕಾರ್ಯದರ್ಶಿಗಳಾದ ಹೆಚ್.ಆರ್. ಕವನ್ಕುಮಾರ್, ಸಿ.ಆರ್. ಜನನಿ, ಕ್ರೀಡಾ ಕಾರ್ಯದರ್ಶಿಗಳಾದ ಬಿ.ಎನ್. ಸುಮಂತ್, ಚಂದನ, ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ಮುಖಂಡರಾದ ಎಸ್. ನವೀನ್ಕುಮಾರ್, ವಿ.ಬಿ.ಹರ್ಷಿತ ಇತರರು ಇದ್ದರು.
ಸಹಾಯಕ ಪ್ರಾಧ್ಯಾಪಕಿ ಡಿ.ಎಸ್. ಮಾನಸ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಕೆ.ಪಿ. ಕುಸುಮ ನಿರ್ವಹಿಸಿ ದರು. ಇದೇ ವೇಳೆ ಅಂತಿಮ ಬಿ.ಎ. ಪದವಿಯ ಹೆಚ್.ಬಿ. ಕವನ್ ಕುಮಾರ್ಗೆ ಉತ್ತಮ ವಿದ್ಯಾರ್ಥಿ ಎಂದು ಗೌರವಿಸಲಾಯಿತು.
ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕøತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಉಪನ್ಯಾಸಕ ಜಿ. ಬಾಲು ವಂದಿಸಿದರು.