ಗೋಣಿಕೊಪ್ಪ ವರದಿ, ಎ. 14: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಮಾಯಮುಡಿ ಗ್ರಾಮದ ವೀರಾಜಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ಅದಿರಾ (19) ಚಿಕಿತ್ಸೆ ಫಲಿಸದೆ ಸಾವನಪ್ಪಿದ ಯುವತಿ. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಬಿ.ಎ ವ್ಯಾಸಂಗ ಮಾಡುತ್ತಿದ್ದ ಅದಿರಾ, 7 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬೆಂಗಳೂರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾಳೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.