ಮಡಿಕೇರಿ, ಏ. 14: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ 10 ಸಖಿ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಈ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ(ಸ್ವೀಪ್) ಸೀರೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮಿಪ್ರಿಯಾ ಅವರು ವಿತರಿಸಿದರು.

ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪಿಂಕ್ ಮಾದರಿಯ ಸೀರೆ ವಿತರಿಸಲಾಗಿತ್ತು, ಆದರೆ ಈ ಬಾರಿ ವಿವಿಧ ಬಣ್ಣದ ಸೀರೆ ವಿತರಿಸಲಾಗಿದೆ. ಜಿಲ್ಲೆಯ 10 ಸಖಿ ಮತಗಟ್ಟೆಗಳಲ್ಲಿ ಬೇರೆ ಬೇರೆ ರೀತಿಯ ಸಮವಸ್ತ್ರ ಇರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ತಿಳಿಸಿದರು.