ಸೋಮವಾರಪೇಟೆ, ಏ. 15: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್‍ನ ಅಭ್ಯರ್ಥಿ ವಿಜಯಶಂಕರ್ ಪರ ಮೈತ್ರಿ ಪಕ್ಷದ ಕಾರ್ಯಕರ್ತರು ಹಾಗೂ, ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪರ ಭಾರತೀಯ ಜನತಾ ಪಾರ್ಟಿ ಕಾರ್ಯರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಪಟ್ಟಣದಲ್ಲಿ ಈಗಾಗಲೇ ಪ್ರಚಾರ ಕಾರ್ಯ ನಡೆಯುತ್ತಿದ್ದು, ಇದೀಗ ಗ್ರಾಮೀಣ ಭಾಗದಲ್ಲೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮೀಪದ ಹಾನಗಲ್ಲು ಶೆಟ್ಟಳ್ಳಿ ಗ್ರಾಮದಲ್ಲಿ ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯೆ ತಂಗಮ್ಮ, ಪ್ರಮುಖರಾದ ಚಂದ್ರಕಾಂತ್, ಚಂದ್ರಶೇಖರ್, ಪೊನ್ನಪ್ಪ, ರಮೇಶ್, ಕೃಷ್ಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪಟ್ಟಣ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಬಿಜೆಪಿ ನಗರಾಧ್ಯಕ್ಷ ಸೋಮೇಶ್, ಪ.ಪಂ. ಸದಸ್ಯರುಗಳಾದ ಪಿ.ಕೆ. ಚಂದ್ರು, ಬಿ.ಆರ್. ಮಹೇಶ್, ಪ್ರಮುಖರಾದ ಸುರೇಶ್, ಸುಮಾ ಸುದೀಪ್, ಗಿರೀಶ್, ದಾಕ್ಷಾಯಿಣಿ, ಉಷಾ ತೇಜಸ್ವಿ, ಲೀಲಾ ನಿರ್ವಾಣಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಕಾಂಗ್ರೆಸ್‍ನಿಂದ ಪ್ರಚಾರ: ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ಪ್ರಚಾರ ನಡೆಸಿ ವಿಜಯಶಂಕರ್ ಪರ ಮತ ಯಾಚಿಸಿದರು. ಪಕ್ಷದ ಪ್ರಮುಖರಾದ ಹೆಚ್.ಎ. ನಾಗರಾಜ್, ಜಮೀರ್, ಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಅಬ್ಬೂರುಕಟ್ಟೆಯಲ್ಲಿ : ಅಬ್ಬೂರುಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆ ಪ್ರಚಾರ ನಡೆಸಿದರು. ಸ್ಥಾನೀಯ ಸಮಿತಿ ಅಧ್ಯಕ್ಷ ಪಿ.ಡಿ. ಪ್ರಕಾಶ್, ಮುಖಂಡರಾದ ಪ್ರದೀಪ್, ಕೃಷ್ಣಪ್ಪ, ಜಯಣ್ಣ, ಅನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬೆಟ್ಟದಳ್ಳಿಯಲ್ಲಿ: ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಪ್ರಮುಖರು ಮತಯಾಚಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಬಿ.ಈ. ಜಯೇಂದ್ರ, ವಲಯ ಅಧ್ಯಕ್ಷರಾದ ಗುರಪ್ಪ, ಈರಪ್ಪ, ಕೂತಿ ಜಗದೀಶ್, ಕಾಂತರಾಜು, ದೇವರಾಜು, ಜೆಡಿಎಸ್ ಮುಖಂಡರಾದ ರಾಜು, ದೊಡ್ಡತೋಳೂರು ಸುರೇಶ್ ಮತ್ತಿತರರು ಭಾಗವಹಿಸಿದ್ದರು.