ಸಿದ್ದಾಪುರ, ಏ. 15: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ವಿಜಯಶಂಕರ್ ಪರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ವೀಕ್ಷಕರಾದ ಡಾ. ಡಿ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಹಾಗೂ ಮತಯಾಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಡಾ. ಡಿ. ತಿಮ್ಮಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ 160 ವರ್ಷದ ಇತಿಹಾಸವಿದೆ. ಈ ಹಿನ್ನೆಲೆಯಲ್ಲಿ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ಆಡಳಿತದಿಂದ ಬೇಸತ್ತಿರುವ ಜನ ಮೈತ್ರಿ ಪಕ್ಷದ ಅಭ್ಯರ್ಥಿ ವಿಜಯಶಂಕರ್‍ಗೆ ಮತ ಚಲಾಯಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮತಯಾಚನೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಲೀಲಾವತಿ, ತಾ.ಪಂ. ಸದಸ್ಯೆ ಕಾವೇರಮ್ಮ, ವಲಯ ಕಾಂಗ್ರೆಸ್ ಅಧ್ಯಕ್ಷೆ ವಾಟೇರಿರ ಸುರೇಶ್ ಸೋಮಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಕಾಡೇಮಾಡ ಸುಬ್ಬಯ್ಯ, ಪಕ್ಷದ ಪ್ರಮುಖರಾದ ಯೋಗೇಶ್, ಸಣ್ಣಯ್ಯ, ರಾಯಪ್ಪ, ಡಿ. ಕುಮಾರ್, ಲಿಂಗರಾಜು, ಗ್ರಾ.ಪಂ. ಸದಸ್ಯರುಗಳಾದ ಶೀಲ, ಜಾನಕಿ ಇತರರು ಹಾಜರಿದ್ದರು. ಯೋಗೇಶ್ ಸ್ವಾಗತಿಸಿ, ವಂದಿಸಿದರು.