ನಾಪೆÇೀಕ್ಲು, ಏ. 15: ಪ್ರಧಾನಿ ನರೇಂದ್ರ ಮೋದಿ ಮತ್ತು ನಾನು ನನ್ನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಈ ಚುನಾವಣೆಯಲ್ಲಿ ನಮ್ಮ ಗೆಲವಿನ ಶ್ರೀರಕ್ಷೆಯಾಗಲಿದೆ ಎಂದು ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರತಾಪ್ ಸಿಂಹ ಹೇಳಿದರು.
ನಾಪೆÇೀಕ್ಲು ಪಟ್ಟಣದ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಕೊಡಗಿನಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ಯಾವ ಕಾರ್ಯಕರ್ತರನ್ನು ಚುನಾವಣೆಗೆ ನಿಲ್ಲಿಸಿದರೂ, ಅವನನ್ನು ಗೆಲ್ಲಿಸುವ ಶಕ್ತಿ ಅವರಲ್ಲಿದೆ. ಇದು ನನ್ನ ಗೆಲವಿಗೆ ಕಾರಣವಾಗಲಿದೆ ಎಂದರು.
ಬಿಜೆಪಿಯ ವತಿಯಿಂದ ಕಳೆದ ಐದು ವರ್ಷಗಳ ಅವಧಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ವಿವರ ನೀಡಿದ ಅವರು ಮೈಸೂರು ರಿಂಗ್ ರೋಡ್‍ಗೆ 177 ಕೋಟಿ, ಮೈಸೂರಿನಲ್ಲಿ ಪಾಸ್‍ಪೆÇೀರ್ಟ್ ಕಚೇರಿ, ಮೈಸೂರು, ಬೆಂಗಳೂರು ಸೇರಿದಂತೆ 6 ನೂತನ ರೈಲುಗಳ ಓಡಾಟ, ಮೈಸೂರಿನಿಂದ ಮಡಿಕೇರಿಗೆ 6 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪತ ರಸ್ತೆ, ಕೊಡಗಿನ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಆದ್ಯತೆ, ಮೈಸೂರಿನಿಂದ ಕುಶಾಲನಗರಕ್ಕೆ 1854 ಕೋಟಿ ರೂ. ವೆಚ್ಚದಲ್ಲಿ ರೈಲು ಮಾರ್ಗ, ಚೆನ್ನರಾಯಪಟ್ಟಣ-ಮಡಿಕೇರಿ- ವೀರಾಜಪೇಟೆ-ಮಾಕುಟ್ಟ ರಸ್ತೆ ಕಾಮಗಾರಿಗೆ ಟೆಂಡರ್, ಕೇರಳದ ಕಾಂಞಂಗಾಡ್-ಭಾಗಮಂಡಲ-ಮಡಿಕೇರಿ ರಸ್ತೆ ಅನುಮೋದನೆ ಸೇರಿದಂತೆ ಕೊಡಗಿನ ಮೂರು ಹೈವೆ ರಸ್ತೆ ನಿರ್ಮಿಸಲು ಕೇಂದ್ರ ಸರಕಾರದಿಂದ ಅನುಮೋದನೆ ಲಭಿಸಿದೆ ಎಂದು ಕಾಮಗಾರಿಗಳ ವಿವರ ನೀಡಿದರು.
ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ ಅಪ್ಪಚ್ಚು ರಂಜನ್ ಇವರುಗಳು 1800 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ರಸ್ತೆಗಳ ಅಭಿವೃದ್ಧಿ, ಜಿಲ್ಲೆಗೆ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಸ್ನಾತಕೋತ್ತರ ಕಾಲೇಜು, ಸೈನಿಕ ಶಾಲೆ ಆರಂಭಗೊಳಿಸಲು ಕಾರಣಕರ್ತರಾಗಿದ್ದಾರೆ. ನಂತರದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ನೀಡಿದ ಕೊಡುಗೆ ಕೊಡಗಿನ ಜನರ ವಿರೋಧಿಯಾದ ಟಿಪ್ಪುವಿನ ಜಯಂತಿ ಎಂದು ಲೇವಡಿ ಮಾಡಿದರು.
ಕೊಡಗಿನಲ್ಲಿ ನಡೆಯುವ ಕೊಡವ ಕೌಟುಂಬಿಕ ಹಾಕಿ ನಮ್ಮೆಗೆ ಬಿಜೆಪಿ ಸರಕಾರ ಮೊದಲ ಬಾರಿಗೆ ಅನುದಾನ ಪ್ರಕಟಿಸಿದೆ. ಸಂಸದರ ನಿಧಿಯಿಂದ ಕೂಡ ಪ್ರತೀ ವರ್ಷ 20 ಲಕ್ಷ ರೂ. ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನಸಭಾ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೆÇೀಕ್ಲು ಬಿಜೆಪಿ ಹೋಬಳಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ವಹಿಸಿದ್ದರು. ನಂತರ ಪಟ್ಟಣದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಲಾಯಿತು.