ಮಡಿಕೇರಿ, ಏ. 19: ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಹಾಗೂ ಹಿರಿಯ ಐಎಎಸ್ ಅಧಿಕಾರಿ ಅಮರ್‍ಜೀತ್ ಸಿನ್ಹ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ರಮಗಳ ಪರಿವೀಕ್ಷಣೆ ನಡೆಸಿದರು. ಪಂಚಾಯತಿ ವ್ಯಾಪ್ತಿಯಲ್ಲಿ ಬಾಪೂಜಿ ಸೇವಾಕೇಂದ್ರ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ, (ಮೊದಲ ಪುಟದಿಂದ) ಗೊಬ್ಬರ ತಯಾರಿಕೆ, ಸ್ಥಳೀಯ ಅಧಿಕಾರ ವಿಕೇಂದ್ರೀಕರಣ ಕಾರ್ಯಕ್ರಮಗಳು ಹಾಗೂ ಡಿಜಿಟಲ್ ಲೈಬ್ರರಿ, ಇ-ಆಡಳಿತದ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗುಡೂರು ಭೀಮಸೈನ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಸ್ವಚ್ಛ ಭಾರತ ಮಿಷನ್ ನೋಡಲ್ ಅಧಿಕಾರಿ ಅಜ್ಜಿಕುಟ್ಟಿರ ಸೂರಜ್, ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಜಯಣ್ಣ, ಪಿಡಿಒ ಅಬ್ದುಲ್ಲ, ಗ್ರಾ.ಪಂ. ಕಾರ್ಯದರ್ಶಿ ಗಂಗಮ್ಮ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದು ಮಾಹಿತಿ ನೀಡಿದರು.