ಮಡಿಕೇರಿ: ಡಾ. ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನದ ನೆರವಿನಿಂದ ಭಾರತೀಯರು ಆರ್ಥಿಕವಾಗಿ ಸಬಲರಾಗಿದ್ದು, ಇದು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಬಿ. ಶಿವಪ್ಪ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೊಗೇರ ಸಮಾಜದ ಗೌರವಾಧ್ಯಕ್ಷ ಪಿ.ಎಂ. ರವಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ ಸಮಾಜ ಸುಧಾರಕರಾಗಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ, ಪ್ರಮುಖರಾದ ಪಿ.ಜಿ. ರಮೇಶ್, ಸೀತಾರಾಂ, ರವಿ, ಪಿ.ಬಿ. ಚಂದ್ರ, ರಾಮಚಂದ್ರ ಮತ್ತಿತರ ಪ್ರಮುಖರು ಹಾಜರಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವೀರಾಜಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದಂತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ಸೀಮಿತರಲ್ಲ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರು ನಡೆಯಬೇಕು ಎಂದು ವೀರಾಜಪೇಟೆ ತಹಶೀಲ್ದಾರ್ ಬಿ.ಎಂ. ಗೋವಿಂದರಾಜು ಹೇಳಿದರು.

ವೀರಾಜಪೇಟೆ ಮಿನಿವಿಧಾನ ಸೌಧ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರೀತಿ ಚಿಕ್ಕಮಾದಯ್ಯ, ಸಹಾಯಕ ಚುನಾವಣಾಧಿಕಾರಿ ಪಿ. ಶ್ರೀನಿವಾಸ್, ಹೆಚ್.ಸಿ. ಚಂದ್ರು ಮುಂತಾದವರು ಉಪಸ್ಥಿತರಿದ್ದರು.

ಸೋಮವಾರಪೇಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕವಾದದು ಎಂದು ತಹಶೀಲ್ದಾರ್ ಗೋವಿಂದರಾಜು ಅಭಿಪ್ರಾಯಿಸಿದರು.

ತಾಲೂಕು ಆಡಳಿತ ವತಿಯಿಂದ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಮಾತನಾಡಿ, ಸಂವಿಧಾನದಿಂದಾಗಿ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸುಧಾರಣೆ ಕಂಡಿದೆ. ಈ ಪರಿವರ್ತನೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಕಾರಣ ಎಂದರು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ವೇದಿಕೆಯಲ್ಲಿ ಪ.ಪಂ. ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಶೇಖರ್, ಉಪ ಖಜಾನೆ ಇಲಾಖೆಯ ರಮೇಶ್ ಅವರುಗಳು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪ್ರಮುಖರು ಇಲ್ಲಿನ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗಂಧರ್ವ ಯುವಕ ಸಂಘ, ಶಾಂತಳ್ಳಿಯ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿ, ಬೆಟ್ಟದಳ್ಳಿಯ ಮಾನವತಾ ಯುವಕ ಸಂಘ ಹಾಗೂ ಗ್ರಾಮಾಭಿವೃದ್ಧಿ ಸಮಿತಿ ಸಿದ್ದಾರ್ಥ ನಗರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಪ.ಪಂ. ಮುಖ್ಯಾಧಿಕಾರಿ ನಟರಾಜ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ಗೋವಿಂದರಾಜು ಸೇರಿದಂತೆ ಸಿಬ್ಬಂದಿಗಳು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಗೋಣಿಕೊಪ್ಪ ವರದಿ: ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ದಲಿತ ಸಂಘರ್ಷ ಸಮಿತಿ ಮೂಲಕ ಆಚರಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಿಂದ ಮೆರವಣಿಗೆ ಮೂಲಕ ಅಗಮಿಸಿದ ನೂರಾರು ಅಂಬೇಡ್ಕರ್ ಅಭಿಮಾನಿಗಳು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನೀಡಿದರು. ಭಾವಚಿತ್ರ ಹೊತ್ತು ಮೆರವಣಿಗೆಯಲ್ಲಿ ಸಾಗಲಾಯಿತು.

ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಸಭಾ ಕಾರ್ಯಕ್ರಮ ಆಚರಿಸಲಾಯಿತು. ಚಿಂತಕ ಲಕ್ಷ್ಮಣ್ ಹೊಸಕೋಟೆ ಅಂಬೇಡ್ಕರ್ ಬಗ್ಗೆ ವಿಷಯ ಮಂಡನೆ ಮಾಡಿದರು.

ದಲಿತ ಮುಖಂಡ ಗೋವಿಂದರಾಜು, ಪ್ರಗತಿಪರ ಚಿಂತಕ ಉಗ್ರ ನರಸಿಂಹ ಗೌಡ ಮಾತನಾಡಿದರು. ಪ್ರಾಧ್ಯಾಪಕ ಚಂದ್ರಣ್ಣ ಹಾಡಿನ ಮೂಲಕ ಅಂಬೇಡ್ಕರ್ ಅವರ ಗುಣಗಾನ ಮಾಡಿದರು. ಈ ಸಂದರ್ಭ ಡಿಎಸ್‍ಎಸ್ ವಿಭಾಗೀಯ ಸಂಚಾಲಕ ಹೆಚ್.ಎನ್. ಕೃಷ್ಣಪ್ಪ, ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್, ಪ್ರಮುಖರುಗಳಾದ ರಜನಿಕಾಂತ್, ಶಿವಕುಮಾರ್, ಗಿರೀಶ್ ಉಪಸ್ಥಿತರಿದ್ದರು.ಶನಿವಾರಸಂತೆ: ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಅಂಗವಾಗಿ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಡಿ.ಎಸ್.ಎಸ್.ನಿಂದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾ ಸಂಯೋಜಕ ಜೆ.ಆರ್. ಪಾಲಾಕ್ಷ, ಮುಖಂಡ ಶಿವಶಂಕರ್, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಸಿ.ಜೆ. ಗಿರೀಶ್, ಮಾಜಿ ಅಧ್ಯಕ್ಷ ಅಬ್ಬಾಸ್, ಜೆ.ಡಿ.ಎಸ್. ಪ್ರಮುಖ ಕೆ.ಎಸ್. ಚೆನ್ನಬಸಪ್ಪ ಮಾತನಾಡಿದರು. ಜಿಲ್ಲಾ ಸದಸ್ಯರಾದ ರಾಮಕುಮಾರ್ ಮತ್ತು ತಂಡದವರಿಂದ ಕ್ರಾಂತಿಗೀತೆ ಹಾಡಿದರು. ಈ ಸಂದರ್ಭ ವಿಮಲಾಕ್ಷಿ, ಎಸ್.ಜೆ. ರಾಜಪ್ಪ, ಶಿವಲಿಂಗ, ಮೋಹನ್, ಪ್ರವೀಣ್, ಸಣ್ಣಯ್ಯ, ಎ.ಜೆ. ಜಗದೀಶ್, ಕೆ.ಆರ್. ಗುರು ಇತರರು ಹಾಜರಿದ್ದರು.

ಸೋಮವಾರಪೇಟೆ: ಉನ್ನತ ಉದ್ಯೋಗ ಪಡೆದು ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುವ ಅವಕಾಶವಿದ್ದರೂ ಶೋಷಿತರ, ದೀನದಲಿತರ ನೋವಿಗೆ ಸ್ಪಂದಿಸಲು ಸ್ವದೇಶಕ್ಕೆ ಹಿಂತಿರುಗಿ ಸೇವೆ ಸಲ್ಲಿಸಿದ ಧೀಮಂತ ಚೇತನ ಅಂಬೇಡ್ಕರ್ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಎಸ್.ಎ. ಮುರಳೀಧರ್ ಬಣ್ಣಿಸಿದರು.

ಸಮೀಪದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಾರ್ಥ ನಗರದಲ್ಲಿ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಮಾನವತಾ ಯುವಕ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯಾವದೇ ಆರ್ಥಿಕ ಬಲವಿಲ್ಲದೇ ಹಿಂದುಳಿದಿದ್ದ ಅಂಬೇಡ್ಕರ್ ಅವರು ಬರೋಡಾ ಮಹಾರಾಜರ ಸಹಾಯದಿಂದ ವಿದೇಶದಲ್ಲಿ ಓದುವ ಅವಕಾಶ ಲಭಿಸಿತ್ತು. ಅದರ ಸದುಪಯೋಗ ಪಡಿಸಿಕೊಂಡು ದೇಶದಲ್ಲಿದ್ದ ಅಸ್ಪøಶ್ಯತೆ, ಕಾರ್ಮಿಕರ ಸಮಸ್ಯೆ, ರೈತರ ಸಮಸ್ಯೆ, ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಹತ್ತು ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದರು ಎಂದು ನೆನಪಿಸಿದರು.

ಸಮಾರಂಭವನ್ನು ಡಾ. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದ ರಾಜ್ಯ ಕಾಂಗ್ರೆಸ್‍ನ ಪರಿಶಿಷ್ಟ ಜಾತಿ ಸಂಚಾಲಕ ಬಿ.ಈ. ಜಯೇಂದ್ರ ಮಾತನಾಡಿ, ಮಧ್ಯಪ್ರಾಚ್ಯ ದೇಶದಿಂದ ವಲಸೆ ಬಂದ ಜನ ಉತ್ತಮವಾಗಿದ್ದ ದೇಶದ ಸಮಾಜವನ್ನು ನಾಲ್ಕು ವರ್ಣಗಳನ್ನಾಗಿ ಒಡೆದು ಆಳಲು ಪ್ರಾರಂಭಿಸಿದ್ದು ಇಂದಿನ ಜಾತೀ ಪದ್ಧತಿಗೆ ಕಾರಣ. ದಲಿತರಿಗೆ ಶಿಕ್ಷಣ ನೀಡಲು ಮುಂದಾದ ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾ ಪುಲೆ ಅವರನ್ನು ಮೇಲ್ವರ್ಗದ ಸಮಾಜ ಅತ್ಯಂತ ಹೀನಾಯವಾಗಿ ಕಂಡಿದ್ದು ದುರಂತ ಎಂದರು.

ಅಧ್ಯಕ್ಷತೆಯನ್ನು ಬಿ.ಬಿ. ಆನಂದ ವಹಿಸಿದ್ದರು. ವೇದಿಕೆಯಲ್ಲಿ ವಲಯ ಅರಣ್ಯ ಅಧಿಕಾರಿ ಬಿ.ಎಂ. ಶಂಕರ್, ಬಿ.ಬಿ. ಪೊನ್ನಪ್ಪ, ಬಿ.ಎಂ. ದಿನೇಶ್, ಪ್ರತಾಪ್, ಚಿನ್ನಮ್ಮ ಮತ್ತಿತರರು ಇದ್ದರು. ಬಿ.ವಿ. ರಾಜು ನಿರೂಪಿಸಿ, ವಿ.ಸಿ. ಜಗದೀಶ್ ವಂದಿಸಿದರು.

*ಗೋಣಿಕೊಪ್ಪಲು: ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯಿತಿ ವತಿಯಿಂದ ಆಚರಿಸಲಾಯಿತು.

ಪೊನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಆದರ್ಶಗಳನ್ನು ಯುವ ಸಮುದಾಯ ಅರಿತುಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಜೀವನವನ್ನು ಉತ್ತಮ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದರು.

ಜಿ.ಪಂ. ಕಾರ್ಯದರ್ಶಿ ಗುರೂರ್ ಭೀಮ್ ಸೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.

ವೀರಾಜಪೇಟೆ: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಆನಂದ ಕಾರ್ಲ ಅವರು ಅಂಬೇಡ್ಕರ್ ಅವರ ಜೀವನವನ್ನು ವಿವರಿಸಿ ಅವರ ಕೊಡುಗೆಯನ್ನು ಸ್ಮರಿಸಿಕೊಂಡರು. ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಾಲಾಕ್ಷಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.ಶನಿವಾರಸಂತೆ: ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ತಿಮ್ಮಶೆಟ್ಟಿ, ಸಿಬ್ಬಂದಿಗಳಾದ ಹೆಚ್.ಸಿ. ಬೋಪಣ್ಣ, ಎಂ.ವಿ. ಶಫೀಕ್, ಶಿವಣ್ಣ, ಹರೀಶ್, ಸೋನಿ ಹಾಗೂ ಇತರರು ಉಪಸ್ಥಿತರಿದ್ದರು.

ಕುಶಾಲನಗರ: ಪರಿಶಿಷ್ಟ ಜಾತಿ-ವರ್ಗಗಳ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಕುಶಾಲನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ನಡೆಯಿತು. ಸ್ಥಳೀಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗುಡ್ಡೆಹೊಸೂರು ಸರಕಾರಿ

ಶನಿವಾರಸಂತೆ: ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ತಿಮ್ಮಶೆಟ್ಟಿ, ಸಿಬ್ಬಂದಿಗಳಾದ ಹೆಚ್.ಸಿ. ಬೋಪಣ್ಣ, ಎಂ.ವಿ. ಶಫೀಕ್, ಶಿವಣ್ಣ, ಹರೀಶ್, ಸೋನಿ ಹಾಗೂ ಇತರರು ಉಪಸ್ಥಿತರಿದ್ದರು.

ಕುಶಾಲನಗರ: ಪರಿಶಿಷ್ಟ ಜಾತಿ-ವರ್ಗಗಳ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ಕುಶಾಲನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ನಡೆಯಿತು. ಸ್ಥಳೀಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗುಡ್ಡೆಹೊಸೂರು ಸರಕಾರಿ ಜೆಟ್ಟಿಯಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟು ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಘೋಷಿಸಿದ್ದರು. ನಂ. 21/1 ರ 65 ಸೆಂಟ್ ಜಾಗವನ್ನು ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರು ಮಾಡಿ, ಲಿಖಿತ ರೂಪದ ಆದೇಶವನ್ನು ಸ್ಥಳದಲ್ಲೇ ಗ್ರಾಮಸ್ಥರಿಗೆ ನೀಡಿ ಮತದಾನ ಮಾಡುವಂತೆ ಮನವೊಲಿಸಿದರು. ಜಾಗ ಮಂಜೂರಾತಿಯ ಆದೇಶ ಸಿಕ್ಕಿದ್ದಕ್ಕೆ ಸಂಭ್ರಮಿಸಿದ ಗ್ರಾಮಸ್ಥರು ಮತದಾನದಲ್ಲಿ ಭಾಗವಹಿಸುವ ಇಂಗಿತ ವ್ಯಕ್ತಪಡಿಸಿದರು.

ಸುಂಟಿಕೊಪ್ಪ: ಆದಿದ್ರಾವಿಡ ಸೇವಾ ಸಮಾಜದ ವತಿಯಿಂದ ಮಾದಾಪುರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಮಾದಾಪುರ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಸೋಮವಾರಪೇಟೆ ತಾಲೂಕು ವೃತ್ತ ನಿರೀಕ್ಷಕ ನಂಜುಡೇಗೌಡ ಹಾಗೂ ಠಾಣಾಧಿಕಾರಿ ಶಿವಶಂಕರ್ ಚಾಲನೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಹೆಚ್.ಕೆ. ಸೋಮಪ್ಪ ಹಾಗೂ ಮಾದಾಪುರ ಪೊಲೀಸ್ ಪೇದೆ ಸುರೇಶ ಮಾತನಾಡಿದರು. ಆದಿದ್ರಾವಿಡ ಸಂಘದ ಮಾದಾಪುರ ಅಧ್ಯಕ್ಷ ಪ್ರಕಾಶ್, ಸುಂಟಿಕೊಪ್ಪದ ಮೊಣ್ಣಪ್ಪ, ಮಧು, ನಂದಿಮೊಟ್ಟೆಯ ವಾಸು, ಅಣ್ಣಪ್ಪ, ಸಿದ್ಧಿಬುದ್ಧಿ ಗಣೇಶ ದೇವಾಲಯ ಸಮಿತಿ ಅಧ್ಯಕ್ಷ ವೈ.ಎಂ. ಕೇಶವ, ಗ್ರಾ.ಪಂ. ಸದಸ್ಯರುಗಳಾದ ಮಜೀದ್, ಎಂ.ಎಂ. ಬೆಳ್ಯಪ್ಪ ಉಪಸ್ಥಿತರಿದ್ದರು.