ಸೋಮವಾರಪೇಟೆ, ಏ. 18: ತಾಲೂಕು ಬಾಲಭವನ ಸಮಿತಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ತಾಲೂಕು ಮಟ್ಟದ ಬೇಸಿಗೆ ಶಿಬಿರ ತಾ. 22 ರಿಂದ ಮೇ 6 ರವರೆಗೆ ತಾ.ಪಂ. ಆವರಣದಲ್ಲಿರುವ ಸ್ತ್ರೀಶಕ್ತಿ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಎಂ. ಅಣ್ಣಯ್ಯ ತಿಳಿಸಿದ್ದಾರೆ.

9 ರಿಂದ 16 ವರ್ಷದೊಳಗಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, 50 ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ. ರಜಾ ದಿನಗಳನ್ನು ಹೊರತುಪಡಿಸಿ, ಬೆಳಿಗ್ಗೆ 9.30 ರಿಂದ ತರಬೇತಿ ಪ್ರಾರಂಭವಾಗಲಿದೆ. ಶಿಬಿರದಲ್ಲಿ ಚಿತ್ರಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಮೆಹಂದಿ, ಯೋಗ, ಕ್ರೀಡೆಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ದೂ.ಸಂಖ್ಯೆ 08276-282281.