ಮಡಿಕೇರಿ, ಏ. 24: ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣಕ್ಕೆ ತಾಳತ್ತ್ಮನೆಯಲ್ಲಿ ಭೂಮಿಪೂಜೆ ಮಾಡಲಾಯಿತು. ಮಡಿಕೇರಿ ತಾಲೂಕಿನ ತಾಳತ್ತ್ಮನೆಯಲ್ಲಿ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ವರ್ ಭೂಮಿಪೂಜೆ ನೆರವೇರಿಸಿ, ಮರಾಠ-ಮರಾಟಿ ಜನಾಂಗ ಬಾಂಧವರಿಗಾಗಿ ಕ್ರೀಡಾಕೂಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಇದು ಕೂಡ ಸಂಘದ ವತಿಯಿಂದ ಹಾಗೂ ದಾನಿಗಳ ಸಹಕಾರದಿಂದ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಸರ್ಕಾರದಿಂದ ಯಾವದೇ ಅನುದಾನ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಕ್ರೀಡಾಕೂಟ ಹಾಗೂ ಸಭಾಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್. ನಾಯ್ಕ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್. ಯೋಗೇಂದ್ರ, ಕೋಶಾಧಿಕಾರಿ ಕಾಂತಿ ಯೋಗೇಂದ್ರ, ಯುವಕ ಸಂಘದ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ಸದಸ್ಯರಾದ ನವೀನ್, ವಿನು, ಕುಮಾರ್ ಉಪಸ್ಥಿತರಿದ್ದರು.