ನಾಪೋಕ್ಲು, ಏ. 24: ಜೀವನದಲ್ಲಿ ಏಳು ಬೀಳುಗಳಿಗೆ ಕುಗ್ಗದೆ ಧೈರ್ಯದಿಂದ ಮುಂದೆ ಸಾಗಬೇಕು. ಶಿಸ್ತು ಮತ್ತು ಸಂಯಮದಿಂದ ಜೀವನ ನಿರ್ವಹಣೆ ಸುಲಭವಾಗಲಿದೆ ಎಂದು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚಂಗುಲಂಡ ಪೂವಯ್ಯ ಹೇಳಿದರು.

ಅಂಕುರ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಗ್ರ್ಯಾಜುಯೇಷನ್ ಡೇ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಂಕುರ್ ಶಾಲೆಯ ಕಾರ್ಯದರ್ಶಿ ರತ್ನಾ ಚರ್ಮಣ ಮಾತನಾಡಿ, ವಿದ್ಯೆಯೊಂದಿಗೆ ವಿನಯವನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು ಎಂದರು. ಶಾಲಾ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಅಂಕುರ್ ಶಾಲೆಯ ಅಧ್ಯಕ್ಷ ರಾಜಾ ಚರ್ಮಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.