ಗೋಣಿಕೊಪ್ಪಲು, ಏ. 24: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕದ ಕೇಂದ್ರ ಕಚೇರಿಯನ್ನು ಅನಾವರಣ ಗೊಳಿಸಲಾಯಿತು. ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತ ಸಂಘದ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಸಂಚಾಲಕ ಆಲೇಮಾಡ ಮಂಜುನಾಥ್, ಅಮ್ಮತ್ತಿ ಹೋಬಳಿ ಸಂಚಾಲಕ ಮಂಡೇಪಂಡ ಪ್ರವೀಣ್, ಮುಖಂಡರಾದ ಸೋಮೆಯಂಗಡ ಗಣೇಶ್, ಮಲ್ಲೆಂಗಡ ಸುಬ್ರಮಣ್ಯ, ಬೋಡಂಗಡ ಅಶೋಕ್, ಮನೆಯಪಂಡ ಗೌತಮ್ ಮುಂತಾದವರು ಉಪಸ್ಥಿತರಿದ್ದರು.