ವೀರಾಜಪೇಟೆ: ವಿಶ್ವ ಭೂ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಾನಂದ್ ಲಕ್ಷ್ಮಣ ಅಂಚಿ ಗಿಡ ನೆಟ್ಟು ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಸಿಂಪಿ, ಅಪರ ಸಿವಿಲ್ ನ್ಯಾಯಾಧೀಶ ಎನ್.ವಿ. ಕೋನಪ್ಪ, ಸಹಾಯಕ ಅರಣ್ಯಧಿಕಾರಿ ಸುಬ್ರಾಯ ವಿವಿಧೆಡೆಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಭೂಮಿ ಮತ್ತು ಅರಣ್ಯವನ್ನು ಉಳಿಸಿ ಬೆಳೆಸಲು ಉತ್ತೇಜನ ನೀಡಿದರು.ಶನಿವಾರಸಂತೆ: ಮುಳ್ಳೂರು ಸರಕಾರಿ ಶಾಲೆಯಲ್ಲಿ ಭೂ ಜಾಗೃತಿಯನ್ನು ಮೂಡಿಸುವದರ ಮೂಲಕ ವಿನೂತನವಾಗಿ ಆಚರಿಸಿದರು. ಕಾರ್ಯಕ್ರಮ ಕುರಿತು ಮಾತನಾಡಿದ ಹಂಡ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಧುಕುಮಾರ್ ಮಾತನಾಡಿದರು. ಶಿಕ್ಷಕ ಸತೀಶ್ ಮಾತನಾಡಿ, ಜೈವಿಕ ಅನಿಲ ಜೈವಿಕ ಗೊಬ್ಬರಗಳನ್ನು ಬಳಸೋಣ ಎಂದರು.