ಮಡಿಕೇರ, ಏ. 25: ಕೊಡಗು ಗೌಡ ಯುವ ವೇದಿಕೆ ವತಿಯಿಂದ ಮೇ 3 ರಿಂದ ಹಮ್ಮಿಕೊಳ್ಳಲಾಗಿರುವ ಗೌಡ ಕ್ರಿಕೆಟ್ ಹಬ್ಬದ ಪ್ರಯುಕ್ತ ಪೂರ್ವಭಾವಿ ಸಭೆ ಇಂದು ನಡೆಯಿತು.

ಕೊಡಗು ಗೌಡ ಸಮಾಜದ ಕಟ್ಟಡದಲ್ಲಿ ನಿರ್ಮಾಣವಾಗಿರುವ ಯುವ ವೇದಿಕೆಯ ನೂತನ ಕಚೇರಿ ಉದ್ಘಾಟನೆ ಬಳಿಕ ಸಭೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ಮೂರು ದಿನಗಳ ಕಾಲ ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ನಡೆಸುವಂತೆ, ಈ ಸಂಬಂಧ ಮೈದಾನ, ವೇದಿಕೆ ನಿರ್ಮಾಣ, ಅತಿಥಿಗಳ ಆಹ್ವಾನ ಇತ್ಯಾದಿ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಪಂದ್ಯಾವಳಿಯಲ್ಲಿ ಭಾಗವಹಿಸಲು ನೋಂದಾವಣೆ ಮಾಡಿಕೊಳ್ಳಲು ತಾ. 28 ಕೊನೆಯ ದಿನವಾಗಿದ್ದು, ತಾ. 30 ರಂದು ತಂಡದ ನಾಯಕರುಗಳ ಸಮಕ್ಷಮ ಟೈಸ್ ಪ್ರಕ್ರಿಯೆ ನಡೆಸುವಂತೆ ನಿರ್ಧರಿಸಲಾಯಿತು.

ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಕ್ಕೇರ ಲಕ್ಷಣ, ಶಿಸ್ತು ಸಮಿತಿ ಅಧ್ಯಕ್ಷ ಪೊಕ್ಕುಳಂಡ್ರ ಮನೋಜ್, ಪ್ರಚಾರ ಮತ್ತು ವೇದಿಕೆ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಹಾಗೂ ನಿರ್ದೇಶಕರು ಭಾಗವಹಿಸಿದ್ದರು.