ಮಡಿಕೇರಿ, ಏ. 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಣ್ಯ ಇಲಾಖೆಯ ಕೊಡಗು ವೃತ್ತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ವಿಜ್ಞಾನ ಪರಿಷತ್ತು ಸಂಯುಕ್ತಾಶ್ರಯದಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಅರಣ್ಯ ಭವನದ ಸಭಾಂಗಣದಲ್ಲಿ ‘ವಿಶ್ವ ಭೂಮಿ ದಿನಾಚರಣೆ’ ಕಾರ್ಯಕ್ರಮ ನಡೆಯಲಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ವಿಷಯ ಮಂಡಿಸಲಿದ್ದಾರೆ.