ಮಡಿಕೇರಿ, ಏ. 26: ನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ತಾ. 27 ರಂದು (ಇಂದು) 3ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಪದ್ಮನಾಭ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಗಣಹೋಮದೊಂದಿಗೆ ಕಲಶಾಭಿಷೇಕ ಮತ್ತು ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ನಡೆಯಲಿದೆ. ಸಂಜೆ 6 ಗಂಟೆಯಿಂದ ಪುತ್ತೂರಿನ ಧೀಶಕ್ತಿ ಮಹಿಳಾ ಯಕ್ಷ ಕೂಟದವರಿಂದ ಶಿವಭಕ್ತ ವೀರಮಣಿ ಎಂಬ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ಏರ್ಪಡಿಸಲಾಗಿದೆ.