ಮಡಿಕೇರಿ, ಏ. 29: ವಾಂಡರರ್ಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಜ್ಞಾಪಕಾರ್ಥ ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 28ನೇ ವರ್ಷದ ಉಚಿತ ಬೇಸಿಗೆ ಶಿಬಿರದಲ್ಲಿ ಇಂದು ಶಿಬಿರಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಓಟ, ಕಪ್ಪೆ ಜಿಗಿತ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದರು.

ಯೋಗ, ಪ್ರಾಣಾಯಾಮ, ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭ ತಾ. 1 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ವಾಂಡರರ್ಸ್ ಹಿರಿಯ ಹಾಕಿ ಆಟಗಾರ ಕೋಟೇರ ಎನ್. ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಅಧ್ಯಕ್ಷ ಬಿ.ಕೆ. ಸುಬ್ಬಯ್ಯ, ಗೌರವ ಅತಿಥಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಹಾಗೂ ಸರ್ವಿಸಸ್‍ನ ಅಥ್ಲೆಟಿಕ್ ತರಬೇತುದಾರ ಬಿ.ಸಿ. ತಿಲಕ್ ಉಪಸ್ಥಿತರಿರುವರು.