ಮಡಿಕೇರಿ, ಏ.29: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರಥಮ ಬಿಎ, ಬಿ.ಕಾಂ ತರಗತಿಗಳಿಗೆ ಈಗಾಗಲೇ ಪ್ರವೇಶಾತಿ ಪ್ರಾರಂಭಗೊಂಡಿದ್ದು, ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿನಿಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಪದವಿ ಪಡೆಯುವ ಅವಕಾಶವಿದ್ದು, ಈ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿನಿಯರು ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಿ ಪ್ರವೇಶ ಪಡೆಯುವಂತೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಕೋರಿದ್ದಾರೆ.