ಮಡಿಕೇರಿ, ಏ. 29: ಕೊಡಗು ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ತಾ. 30ರಂದು (ಇಂದು) ಪತ್ರಿಕಾ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಾಜಿ ಅಧ್ಯಕ್ಷ ಎಚ್.ಟಿ. ಅನಿಲ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್, ವೀರಾಜಪೇಟೆ ಅಧ್ಯಕ್ಷ ಎಸ್.ಎಂ. ಚಂಗಪ್ಪ ಆಗಮಿಸುವರು. ‘ಪತ್ರಕರ್ತರ ಹೊಣೆಗಾರಿಕೆ’ ವಿಷಯದಡಿ ಮೈಸೂರು ಮಾನಸಗಂಗೋತ್ರಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಸಪ್ನಾ ನಾಯಕ್ ಮುಖ್ಯ ಭಾಷಣ ಮಾಡುವರು. ‘ಶಕ್ತಿ’ ಉಪಸಂಪಾದಕ ಕುಡೆಕಲ್ ಸಂತೋಷ್, ವರದಿಗಾರ್ತಿ ರಜಿತಾ ಕಾರ್ಯಪ್ಪ ಸೇರಿದಂತೆ ಒಟ್ಟು 14 ಮಂದಿ ಪತ್ರಕರ್ತರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.