ಮಡಿಕೇರಿ, ಮೇ 2: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ತಾ. 3 ರಿಂದ (ಇಂದಿನಿಂದ) 5ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9ನೇ ವರ್ಷದ ‘ಜೈ ಜವಾನ್ ಟ್ರೋಫಿ’ ರಾಜ್ಯ ಮಟ್ಟದ ಕ್ರಿಕೆಟ್ ಹಾಗೂ ಥ್ರೋಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಸಮಾಜದ ಗೌರವ ಅಧ್ಯಕ್ಷರಾದ ಬಿ.ಎಂ. ರವಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಪಂದ್ಯಾವಳಿಗೆ ‘ಜೈ ಜವಾನ್ ಟ್ರೋಫಿ’ಎಂದು ಹೆಸರನ್ನಿರಿಸಲಾಗಿದೆಯೆಂದು ತಿಳಿಸಿ, ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಘಟಿಸಿದ ಪ್ರಾಕೃತಿಕ ವಿಕೋಪಗಳ ಹಿನ್ನೆಲೆಯಲ್ಲಿ ಮೊಗೇರ ಸಮಾಜದ ಹಲ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಿದ್ದರೂ ಕ್ರೀಡಾಕೂಟವನ್ನು ನಿಲ್ಲಿಸಬಾರದೆನ್ನುವ ಕಾರಣದಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಕೈಬಿಟ್ಟು ಸರಳ ರೀತಿಯಲ್ಲಿ ನಡೆಸಲಾಗುತ್ತಿದೆ. ಪಂದ್ಯಾವಳಿಯಲ್ಲಿ ಪ್ರಮುಖವಾಗಿ ಕ್ರಿಕೆಟ್, ಥ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ಎಲ್ಲಾ ವಯೋಮಾನದವರಿಗೆ ಅನ್ವಯವಾಗುವ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿರುವದಾಗಿ ಮಾಹಿತಿಯನ್ನಿತ್ತರು.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 38 ಸಾವಿರಕ್ಕೂ ಹೆಚ್ಚಿನ ಮೊಗೇರ ಸಮಾಜದ ಬಂಧುಗಳು ನೆಲೆಸಿದ್ದು, ಇವರನ್ನು ಒಂದೆಡೆ ಸೌಹಾರ್ದಯುತವಾಗಿ ಸೇರಿಸಿ ಸಂಘಟನೆಯನ್ನು ಶಕ್ತಿಯುತಗೊಳಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ರಾಜ್ಯ ಮಟ್ಟದ ಈ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಗೆ ಈಗಾಗಲೆ ಉಡುಪಿ, ಮಂಗಳೂರು, ಸುಳ್ಯ, ಪುತ್ತ್ತೂರು, ಕಾಸರಗೋಡು ಸೇರಿದಂತೆ ವಿವಿಧೆಡೆಗಳ 40 ತಂಡಗಳು ಹೆಸರನ್ನು ಈಗಾಗÀಲೆ ನೋಂದಾಯಿಸಿಕೊಂಡಿರುವದಾಗಿ ಹೇಳಿದರು. ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ. 9483487528, 9964060716,
(ಮೊದಲ ಪುಟದಿಂದ) 8197875043, 9481114585 ನ್ನು ಸಂಪರ್ಕಿಸಬಹುದೆಂದರು.
ಪಂದ್ಯಾವಳಿಯನ್ನು ತಾ. 3 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮೊಗೇರ ಸೇವಾ ಸಮಾಜದ ಸ್ಥಾಪಕ ಅಧ್ಯಕ್ಷರಾದ ಸದಾನಂದ ಮಾಸ್ಟರ್ ಉದ್ಘಾಟಿಸಲಿದ್ದು, ಸಮಾಜದ ಲಾಂಛನವನ್ನು ಹೊಂದಿದ ಧ್ವಜಾರೋಹಣವನ್ನು ಸಮಾಜದ ಜಿಲ್ಲಾಧ್ಯಕ್ಷ ಬಿ. ಶಿವಪ್ಪ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ. ಹರೀಶ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಮೊಗೇರ ಸಮಾಜದ ರಾಜ್ಯ ಸಮಿತಿ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆಂದರು.
ಸಮಾರೋಪ ಸಮಾರಂಭ ಮೇ5 ರಂದು ನಡೆಯಲಿದ್ದು, ಇದರಲ್ಲಿ ಜಿಲ್ಲೆಯ ಇಬ್ಬರು ಶಾಸಕರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೊಗೇರ ಸಮಾಜ ಬಾಂಧವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದು ತಿಳಿಸಿದ ರವಿ ಅವರು, ಮುಂದಿನ ಸಾಲಿನಲ್ಲಿ ಕ್ರೀಡಾ ಕೂಟದ ದಶಮಾನೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುತ್ತದೆಂದು ತಿಳಿಸಿದರು. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚಿನ ಅಂಕ ಪಡೆದ ಮೊಗೇರ ಸಮಾಜದ ವಿದ್ಯಾರ್ಥಿಗಳನ್ನು ಮುಂಬರುವ ದಿನಗಳಲ್ಲಿ ಪುರಸ್ಕರಿಸಿ ಪ್ರೋತ್ಸಾಹಿಸಲಾಗುತ್ತದೆಂದು ತಿಳಿಸಿದರು.
ಗೋಷ್ಠಿಯಲ್ಲಿ ಮೊಗೇರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜಿ.ಚಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪಿ.ಬಿ. ಸುರೇಶ್, ಸಮಾಜದ ಕ್ರೀಡಾ ಘಟಕದ ಅಧ್ಯಕ್ಷರಾದ ಪಿ.ಸಿ. ರಮೇಶ್, ಖಜಾಂಚಿ ಎಂ.ಬಿ. ವಿವೇಕ್ ಉಪಸ್ಥಿತರಿದ್ದರು.