ಬೆಂಗಳೂರು, ಮೇ 4: ಅರಣ್ಯ ಹಕ್ಕು ಕಾಯಿದೆಯಡಿ ತಿರಸ್ಕøತ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿರುವದು ರಾಜ್ಯದ ಲಕ್ಷಾಂತರ ಅರಣ್ಯವಾಸಿ ಕುಟುಂಬಗಳಿಗೆ ತಾತ್ಕಾಲಿಕ ನೆಮ್ಮದಿ ತಂದಿದ್ದು, ಒಕ್ಕಲೆಬ್ಬಿಸುವ ಆತಂಕ ಸದ್ಯಕ್ಕೆ ದೂರವಾಗಿದೆ.

ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ತಿರಸ್ಕøತಗೊಂಡ ಪ್ರಕರಣಗಳಲ್ಲಿ ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸಬೇಕೆಂಬ ಈ ಮುಂಚಿನ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಕೋರ್ಟ್ ನಿರ್ದೇಶನದಂತೆ ಅರ್ಜಿಗಳನ್ನು ಪುನರ್ ಪರಿಶೀಲಿಸಲು ರಾಜ್ಯ ಸರಕಾರ ಮುಂದಾಗಿದೆ.

ಈ ಹಿಂದೆ ಅರ್ಜಿ ತಿರಸ್ಕರಿಸಿದ ಸಮಿತಿಗಳೇ ಪರಿಷ್ಕøತ ಮಾರ್ಗಸೂಚಿ ಅನ್ವಯ ಪುನರ್ ಪರಿಶೀಲಿಸುವಂತೆ ಹಾಗೂ ಆದ್ಯತೆ ಮೇಲೆ ಈ ಮಂಜೂರು ಪ್ರಕ್ರಿಯೆಯನ್ನು ಕೈಗೆತ್ತಿಕೊಂಡು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ತಿರಸ್ಕರಿಸಲ್ಪಟ್ಟ ಅರ್ಜಿದಾರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲು ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಯು ಜುಲೈ 24ರಂದು ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆಗೆ ಬರುತ್ತಿದ್ದು, ರಾಜ್ಯ ಸರಕಾರದ ಪರವಾಗಿ ಮುಖ್ಯ ಕಾರ್ಯದರ್ಶಿಗಳು ಹಾಜರಾಗಿ ಪ್ರಮಾಣಪತ್ರ ಸಲ್ಲಿಸಬೇಕಾಗಿದೆ.