ನಾಪೆÉÇೀಕ್ಲು, ಮೇ 4: ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಶೈಕ್ಷಣಿಕಾಭಿವೃದ್ಧಿಗೆ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ 1 ರಿಂದ 12ನೇ ತರಗತಿವರೆಗೆ ಒಂದೇ ಆಡಳಿತ ವ್ಯವಸ್ಥೆಯಲ್ಲಿ, ಒಂದೇ ಕ್ಯಾಂಪಸ್‍ನಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನಡೆಸಲು ಕ್ರಮ ಕೈಗೊಂಡಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗೆ ಅನುಮೋದನೆ ನೀಡಿದೆ. ಅದರಂತೆ ನಾಪೆÇೀಕ್ಲುವಿಗೂ ಕರ್ನಾಟಕ ಪಬ್ಲಿಕ್ ಶಾಲೆಯ ಭಾಗ್ಯ ದೊರೆತಿದೆ. ಆದರೆ ಪ್ರೌಢಶಾಲೆಯ ಇಬ್ಬರೂ ಶಿಕ್ಷಕರು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಇದಕ್ಕೆ ವಿಲೀನಗೊಳಿಸುವ ಬದಲು ಚೆರಿಯಪರಂಬು ಪ್ರಾಥಮಿಕ ಶಾಲೆಯನ್ನು ಸೇರ್ಪಡೆಗೊಳಿಸಲು ಪ್ರಯತ್ನ ನಡೆಸುತ್ತಿರುವದು ತಿಳಿದು ಬಂದಿದೆ. ಆದುದರಿಂದ ಕೂಡಲೇ ಜಿಲ್ಲಾ ಶಿಕ್ಷಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾಪೆÇೀಕ್ಲು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಗ್ರಾಮಸ್ಥ ಹಾಗೂ ಶಾಲೆಯ ಹಳೇ ವಿದ್ಯಾರ್ಥಿಗಳಾದ ಬೊಪ್ಪೇರ ಸಿ. ಕಾವೇರಪ್ಪ, ಜಯ ಕರ್ನಾಟಕ ಸಂಘಟನೆ ಮತ್ತು ಮಾನವ ಹಕ್ಕು ಆಯೋಗದ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ, ಬೊಳ್ಳೇಪಂಡ ಕರುಂಬಯ್ಯ, ಕುಂಡ್ಯೋಳಂಡ ಸಂಪತ್, ಸಾದಲಿ, ರಮೇಶ್, ಇಬ್ರಾಹಿಂ, ಎಂ.ಇ. ರಜಾಕ್, ಶಿವಶಂಕರ್ ಮತ್ತಿತರರು ಎಚ್ಚರಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು, ಸರಕಾರ ಎಲ್ಲಾ ಸವಲತ್ತುಗಳನ್ನು ನೀಡಿದರೂ ಸರಕಾರದ ಸಂಬಳ ಪಡೆಯುತ್ತಿರುವ ಶಿಕ್ಷಕರು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಬಿಟ್ಟು ಚೆರಿಯಪರಂಬು ಶಾಲೆಯನ್ನು ಆಯ್ಕೆ ಮಾಡಿರುವದು ಯಾವ ಮಾನದಂಡದ ಮೇಲೆ? ಮಾದರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ರವರೆಗೆ ತರಗತಿಗಳಿವೆ. ಆದರೆ ಚೆರಿಯಪರಂಬುವಿನಲ್ಲಿ 1 ರಿಂದ 5 ರವರೆಗೆ ಮಾತ್ರ ತರಗತಿಗಳಿವೆ. 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳನ್ನು ಯಾವ ಶಾಲೆಯಲ್ಲಿ ದಾಖಲಿಸುವದು? ಎಂದು ಪ್ರಶ್ನಿಸಿದ ಅವರು ಇದಕ್ಕೆ ಈ ಶಿಕ್ಷಕರೇ ಉತ್ತರ ನೀಡಬೇಕು ಎಂದರು. ಸರಕಾರದ ನಿಯಮದ ಪ್ರಕಾರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್.ಕೆ.ಜಿ. ತರಗತಿಗಳು ಆರಂಭಗೊಳ್ಳುತ್ತದೆ. ಪಟ್ಟಣದ ಬಳಿಯಿರುವ ಶಾಲೆಯನ್ನು ಬಿಟ್ಟು ಗ್ರಾಮೀಣ ಪ್ರದೇಶದ ಶಾಲೆಗೆ ವಿದ್ಯಾರ್ಥಿಗಳನ್ನು ಯಾರೂ ಕಳುಹಿಸುತ್ತಾರೆ. ಅಲ್ಲಿಗೆ ಬಸ್ ಸಂಪರ್ಕ ಕೂಡ ಇರುವದಿಲ್ಲ ಎಂದು ತಿಳಿಸಿದರು.

ಕೆಲವು ಶಿಕ್ಷಕರು ಈ ಬಗ್ಗೆ ಶಿಕ್ಷಣಾಧಿಕಾರಿಗಳನ್ನು ಕೂಡ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿ ರುವದರ ಬಗ್ಗೆ ತಿಳಿದು ಬಂದಿದೆ. ಬ್ರಿಟಿಷರ ಕಾಲದಲ್ಲಿ ಆರಂಭಿಸಲಾದ ಸುಮಾರು 148 ವರ್ಷಗಳಷ್ಟು ಹಳೆಯದಾದ ಈ ಶಾಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯೊಂದಿಗೆ ವಿಲೀನಗೊಳಿಸದಿದ್ದರೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.