ಮಡಿಕೇರಿ ಮೇ 3: ಕೊಡವ ಸಮಾಜಗಳ ಒಕ್ಕೂಟದ ಪೊಮ್ಮಕ್ಕಡ ಕೂಟದ ವಾರ್ಷಿಕ ಮಹಾಸಭೆ ಬಾಳುಗೋಡು ಕೊಡವ ಸಮಾಜದಲ್ಲಿ ನಡೆಯಿತು. ಕೂಟದ ಅಧ್ಯಕ್ಷೆ ಚೆರಿಯಪಂಡ ಇಮ್ಮಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆ ಮಾಡಿದ ಸದಸ್ಯರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಮಾಡಿ ಗೌರವಿಸಲು ನಿರ್ಧರಿಸಲಾಯಿತು. ಸಾಮಾಜಿಕ ಕಳಕಳಿಯೊಂದಿಗೆ ಕೂಟದ ಬಲವರ್ಧನೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಮುಖರು ಸಲಹೆ ನೀಡಿದರು. ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪುಷಿ ಅಪ್ಪಣ್ಣ ಪ್ರಾರ್ಥಿಸಿದರು, ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ವಾರ್ಷಿಕ ವರದಿ ಓದಿದರು. ಕಾರ್ಯದರ್ಶಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ವಂದಿಸಿದರು.