ಮಡಿಕೇರಿ ಮೇ 5: ಜಿಲ್ಲಾಡಳಿತ, ಜಿಲಾ ್ಲಪಂಚಾಯಿತಿ, ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 9 ರಿಂದ 16 ವರ್ಷದ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ತಾ. 6 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಶಿಶು ಕಲ್ಯಾಣ ಸಂಸ್ಥೆ, ಸರ್ಕಾರಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ತರಬೇತಿಯನ್ನು ಪಡೆದ ಮಕ್ಕಳು ತಮ್ಮ ಪ್ರದರ್ಶನವನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.