ನಾಪೋಕ್ಲು, ಮೇ 5: ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೋರಿ ಸಮೀಪದ ಬಾವಲಿ ಗ್ರಾಮದ ಗ್ರಾಮಸ್ಥರು ಹಾಗೂ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ನಾಪೋಕ್ಲು ಠಾಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮದಲ್ಲಿ ನಿರಂತರ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದ್ದು, ಸಮಸ್ಯೆಯಾಗುತ್ತಿದೆ.

ಗ್ರಾಮದಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು ಇಲ್ಲಿನ ಭಗವತಿ ದೇವಾಲಯದಲ್ಲಿ ಹಾಗೂ ಶಾಸ್ತಾವು ದೇವಾಲಯದಲ್ಲಿ ಹುಂಡಿ ಕಳವು ನಡೆದಿದೆ. ಅಂಗನವಾಡಿಯಲ್ಲೂ ಕಳ್ಳತನವಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಬಗ್ಗೆ ಠಾಣಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳವಂತೆಯೂ ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವದಾಗಿಯೂ ಅವರು ಎಚ್ಚರಿಸಿದ್ದಾರೆ.