ಮಡಿಕೇರಿ, ಮೇ 5: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ತಾ. 7 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.