ಮಡಿಕೇರಿ, ಮೇ 5: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿಗೆ ಪ್ರಥಮ ಬಿಎ ಮತ್ತು ಬಿಕಾಂ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಪ್ರವೇಶ ಪಡೆಯುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಿಂದ ವಿನಾಯಿತಿ ಇದ್ದು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಆಸ್ಪತ್ರೆ ಕಾಲೇಜಿಗೆ ಸಮೀಪವಿದೆ.

ಈ ಕಾಲೇಜು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಇದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಹಾಗೂ ಬಸ್‍ಪಾಸ್ ವ್ಯವಸ್ಥೆ ಮಾಡಿಕೊಡಲಾಗುವದು. ಈ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿದೆ.

ಗ್ರಂಥಾಲಯ ವ್ಯವಸ್ಥೆ, ವಾಚನಾಲಯ, ವಿದ್ಯಾರ್ಥಿನಿಯರಿಗೆ ವಿಶ್ರಾಂತಿ ಕೊಠಡಿ, ಯುಜಿಸಿಯಿಂದ ಆಯ್ಕೆಗೊಂಡಿರುವ ಖಾಯಂ ನುರಿತ ಪ್ರಾಧ್ಯಾಪಕರಿಂದ ಬೋಧನೆ, ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಗಳಿಗೆ ಆದ್ಯತೆ ನೀಡಲಾಗುವದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.