ನಾಪೆÇೀಕ್ಲು, ಮೇ 5: ನಾಪೆÇೀಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಅವ್ಯವಸ್ಥೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸದಿದ್ದರೆ, ಜಯ ಕರ್ನಾಟಕ ಸಂಘಟನೆ, ನಾಪೆÇೀಕ್ಲು ವಾಹನ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವದು ಎಂದು ಸಂಘಟನೆ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಎಚ್ಚರಿಸಿದ್ದಾರೆ.