ಮಡಿಕೇರಿ, ಮೇ 6: ಮಡಿಕೇರಿ ಮಹದೇವಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಬಸವ ಜಯಂತಿಯನ್ನು ತಾ. 7ರಂದು (ಇಂದು) ಆಚರಿಸಲಾಗುತ್ತದೆ. ಬೆಳಿಗ್ಗೆ 10.30ಕ್ಕೆ ರುದ್ರಾಭಿಷೇಕ, ಬೆಳಿಗ್ಗೆ 11.30ಕ್ಕೆ ಬಸವಣ್ಣನವರ ವಚನ ಗಾಯನದ ಬಳಿಕ ಫೀಲ್ಡ್‍ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ.