ಸೋಮವಾರಪೇಟೆ, ಮೇ 7: ಮಕ್ಕಳ ಸಹಾಯವಾಣಿ ಕೇಂದ್ರದಿಂದ ಬಜೆಗುಂಡಿ ಗ್ರಾಮದ ಸಮುದಾಯ ಭವನದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ‘ತೆರೆದ ಮನೆ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೊಲೀಸ್ ಇಲಾಖೆಯ ಶಿವಕುಮಾರ್ ಅವರು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾಹಿತಿ ಒದಗಿಸಿದರೆ, ಆರೋಗ್ಯ ಸಿಬ್ಬಂದಿ ಸುಕೃತ ಮಹಿಳೆಯರ ಆರೋಗ್ಯ ಸುಧಾರಣೆ ಬಗ್ಗೆ ತಿಳಿಸಿದರು. ಇಲಾಖೆಯ ಮೇಲ್ವಿಚಾರಕಿ ನಿರ್ಮಲ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಿದರು. ಚೈಲ್ಡ್‍ಲೈನ್‍ನ ಸಂಯೋಜಕ ನವೀನ್ ಮಕ್ಕಳ ಸಹಾಯವಾಣಿ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕಾಂತಿ, ಮಕ್ಕಳ ಸಹಾಯವಾಣಿ ಕೇಂದ್ರ ಆರೋಗ್ಯ ಸಹಾಯಕಿಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.