ಸೋಮವಾರಪೇಟೆ, ಮೇ 7: ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ “ನೆರವು ನಮ್ಮದು, ನ್ಯಾಯ ನಿಮ್ಮದು” ಮಾಹಿತಿ ಕಾರ್ಯಾಗಾರ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಪರಶುರಾಮ ಎಫ್. ದೊಡ್ಡಮನಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕೆಂದರು. ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ, ಶಾಲಾ ಮುಖ್ಯ ಶಿಕ್ಷಕ ವೀರಪ್ಪ ಮಡಿವಾಳರ, ಪಿಡಿಓ ಕಾವೇರಿ ಹಾಗೂ ವಕೀಲ ಚಂದ್ರಶೇಖರ್ ಇದ್ದರು.