ಸೋಮವಾರಪೇಟೆ, ಮೇ 7: ಸಮೀಪದ ಹಾರಳ್ಳಿ ಬೀಟಿಕಟ್ಟೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ರೀಡಾಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಹಾರಳ್ಳಿ ಬೀಟಿಕಟ್ಟೆ ಮೈದಾನದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಗಣೇಶ್ ಪ್ರಥಮ, ಕಿಸಾನ್ ತಂಡ ದ್ವಿತೀಯ ಸ್ಥಾನ ಗಳಿಸಿದರು. ಮಹಿಳೆಯರ ಹಗ್ಗಜಗ್ಗಾಟ ಸ್ಫರ್ಧೆಯಲ್ಲಿ ನಿಶಾ ತಂಡ ಪ್ರಥಮ, ಸುನಿತಾ ತಂಡ ದ್ವಿತೀಯ, ಪುರುಷರ ವಿಭಾಗದಲ್ಲಿ ದಯಾನಂದ ತಂಡ ಪ್ರಥಮ, ರತ್ನಾಕರ ತಂಡ ದ್ವಿತೀಯ ಸ್ಥಾನ ಗಳಿಸಿತು.
ಬಾಲಕರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿನೋದ್ ಪ್ರಥಮ ಹಾಗೂ ಪ್ರೀತಮ್ ದ್ವಿತೀಯ ಸ್ಥಾನ ಗಳಿಸಿದರು. ಬಹುಮಾನ ವಿತರಣಾ ಸಮಾರಂಭದಲ್ಲಿ ಸಂಘದ ಅಭಿವೃದ್ಧಿಗೆ ಅನುದಾನ ಕಲ್ಪಿಸಿದ ತಾಲೂಕು ಪಂಚಾಯಿತಿ ಸದಸ್ಯೆ ಕುಸುಮಾ ಅಶ್ವಥ್, ಗ್ರಾಮ ಪಂಚಾಯಿತಿ ಸದಸ್ಯ ಎಸ್.ಎನ್.ಪೃಥ್ವಿ ಅವರುಗಳನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಬಿ.ಎಸ್.ಕುಮಾರ್, ಮಾಜಿ ಅಧ್ಯಕ್ಷ ಟಿ.ಆರ್.ರಾಮಚಂದ್ರ, ಗೌರವ ಸಲಹೆಗಾರ ಎಚ್.ಜೆ.ಹನುಮಯ್ಯ ಬಹುಮಾನ ವಿತರಿಸಿದರು.