ಮಡಿಕೇರಿ, ಮೇ 7: ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವಾಗ ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿ, ಆಧಾರ್ ಕಾರ್ಡ್ ಸಂಖ್ಯೆ, ಜಾತಿ ಪ್ರಮಾಣ ಪತ್ರ, ಅಭ್ಯರ್ಥಿಯ ಪೋಟೋ, ಅಭ್ಯರ್ಥಿಯು ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಹೊಂದಿರುವ ಉಳಿತಾಯ ಖಾತೆಯ ವಿವರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08276-281115 ರಲ್ಲಿ ಸಂಪರ್ಕಿಸುವದು.