ಸೋಮವಾರಪೇಟೆ, ಮೇ 7 : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ‘ನೆರವು ನಮ್ಮದು-ನ್ಯಾಯ ನಿಮ್ಮದು’ ಕಾರ್ಯಕ್ರಮಕ್ಕೆ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ಎಫ್. ದೊಡ್ಡಮನಿ ಚಾಲನೆ ನೀಡಿದರು.
ಪಟ್ಟಣದ ಜೇಸಿ ವೇದಿಕೆ ಮುಂಭಾಗ ಸಾಕ್ಷರತಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಗ್ರಾಮೀಣ ಜನರಿಗೆ ಕಾನೂನಿನ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದರು.
ತಾಲೂಕಿನಲ್ಲಿ ಒಟ್ಟು ನಾಲ್ಕು ದಿನಗಳ ಕಾರ್ಯಾಗಾರ ನಡೆಯ ಲಿದ್ದು, ಸೋಮವಾರಪೇಟೆ ಮತ್ತು ಶನಿವಾರಸಂತೆ ಕುಶಾಲನಗರದಲ್ಲಿ ನಡೆಯಲಿದೆ ಎಂದರು.
ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ತಿಮ್ಮಯ್ಯ, ಸಂಘದ ನಿರ್ದೇಶಕ ಬಿ.ಈ. ಜಯೇಂದ್ರ, ಎಚ್.ಸಿ. ನಾಗೇಶ್ ಹಾಗೂ ತಾಲೂಕಿನ ವಿವಿಧ ಇಲಾಖಾಧಿಕಾರಿ ಗಳು, ಸಾರ್ವಜನಿಕರು ಉಪಸ್ಥಿತರಿ ದ್ದರು.