ಮಡಿಕೇರಿ, ಮೇ 6: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಯೂತ್ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ತಾ.8 ರಂದು (ನಾಳೆ) ವಿಶ್ವ ರೆಡ್ ಕ್ರಾಸ್ ದಿನಾಚರಣೆ ಆಯೋಜಿಸಲಾಗಿದೆ.

ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರೂ ಆದ ಅನೀಸ್ ಕಣ್ಮಣಿ ಜಾಯ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಕೆ.ಬಿ. ಕಾರ್ಯಪ್ಪ ಪಾಲ್ಗೊಳ್ಳಲಿದ್ದು, ಮುಖ್ಯ ಉಪನ್ಯಾಸವನ್ನು ಕಮ್ಯುನಿಟಿ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವರಾಜ್ ಬಿ.ಎಂ. ಮಾಡಲಿದ್ದು, ಕೊಡಗು ರೆಡ್ ಕ್ರಾಸ್‍ನ ಕೊಡಗು ಶಾಖೆಯ ಅಧ್ಯಕ್ಷ ಬಿ.ಕೆ. ರವೀಂದ್ರ ರೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಚ್.ಆರ್. ಮುರಳೀಧರ್ ತಿಳಿಸಿದ್ದಾರೆ.