ಮಡಿಕೇರಿ, ಮೇ 7: ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣವಾಗುತ್ತಿರುವ ನೆಹರು ಮಂಟಪ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದ್ದು, ನಿರ್ವಹಣೆಗೆ ಅಗತ್ಯ ಕ್ರಮವಹಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜಾಸೀಟು ಅಭಿವೃದ್ಧಿ ಸಮಿತಿ ನೆಹರು ಮಂಟಪ ನಿರ್ವಹಣೆ ಮಾಡಲು ಸಭೆಯಲ್ಲಿ ತೀರ್ಮಾನಿಸ ಲಾಯಿತು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಗೆಯ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡುವದು, ಉದ್ಯಾನವನದಲ್ಲಿ ಕುಡಿಯುವ ನೀರು ಒದಗಿಸುವದು, ರಕ್ಷಕರನ್ನು ನಿಯೋಜಿಸುವದು ಮತ್ತಿತರ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರಾಜಾಸೀಟು ಉದ್ಯಾನವನ ಸರಿಯಾಗಿ ನಿರ್ವಹಣೆ ಮಾಡದಿರುವ ದಕ್ಕೆ ಅವರು ತೀವ್ರ ಅಸಮಾದಾನ ವ್ಯಕ್ತಪಡಿಸಿದರು. ಸಮವಸ್ತ್ರದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸದೇ ಇರುವದು, ರಕ್ಷಕರನ್ನು ನಿಯೋಜಿಸದೇ ಇರುವದು ಮತ್ತಿತರ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ರಾಜಾಸೀಟು ಉದ್ಯಾನವನ ನಿರ್ವಹಣೆ ಮಾಡದಿದ್ದರೆ ಕ್ರಮ ಜರುಗಿಸಬೇಕಾಗು ತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು. ರಾಜಾಸೀಟಿನಲ್ಲಿ ಹೊರ ಗುತ್ತಿಗೆ ಸಿಬ್ಬಂದಿಗಳ ನಿಯೋಜನೆ ಸಂಬಂಧ ಟೆಂಡರ್ ಆಹ್ವಾನಿಸುವಂತೆ ತಿಳಿಸಿದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ ರಾಜಾಸೀಟು ಹಾಗೂ ಉದ್ಯಾನವನ ದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಉಪ ನಿರ್ದೇಶಕ ಚಂದ್ರಶೇಖರ್, ಪೌರಾಯುಕ್ತ ಎಂ.ಎಲ್. ರಮೇಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ತಮ್ಮಯ್ಯ, ತೋಟಗಾರಿಕೆ ಇಲಾಖೆ ತಾಂತ್ರಿಕ ಸಹಾಯಕ ಗುರುರಾಜ್, ಪ್ರವಾಸೋದ್ಯಮ ಅಧಿಕಾರಿ ರಾಘವೇಂದ್ರ, ರಾಜಾಸೀಟು ಉದ್ಯಾನ ವನ ಸಿಬ್ಬಂದಿ ಇತರರು ಇದ್ದರು.