ಕುಶಾಲನಗರ, ಮೇ 7: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಅಂತರಾಳದಿಂದ ಜ್ಞಾನದ ಹಸಿವನ್ನು ಹೆಚ್ಚಿಸಿಕೊಳ್ಳುವ ಪ್ರಜ್ಞೆ ಬೆಳೆಸಿಕೊಂಡು ಬದುಕನ್ನು ಸಾರ್ಥಕ ಪಡಿಸಿಕೊಳ್ಳ ಬೇಕು ಎಂದು ಏಕತಾರಿ ಸಾಂಸ್ಕøತಿಕ ಸಂಘಟನೆ ಅಧ್ಯಕ್ಷ ಮತ್ತು ಗಾಯಕ ಕೆ.ಕೆ. ದೇವಾನಂದ ವರಪ್ರಸಾದ್ ಇಂಗಿತ ವ್ಯಕ್ತಪಡಿಸಿದರು.

ಮಂಗಳೂರು ವಿಶ್ವವಿದ್ಯಾನಿಲ ಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರದಲ್ಲಿ ಜ್ಞಾನ ಕಾವೇರಿ ಸಾಂಸ್ಕøತಿ ಮತ್ತು ಕ್ರೀಡಾ ವೈಭವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್ ಮಾತನಾಡಿ, ಅಂತರರಾಷ್ಟ್ರೀಯ ಸಂಶೋಧನಾ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟೀಯ ವಿಚಾರ ಸಂಕಿರಣ, ಕಮ್ಮಟಗಳ ಶಿಬಿರವನ್ನು ಕೂಡ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಮಾಹಿತಿ ಒದಗಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಭಾರ ಕುಲಪತಿ ಪ್ರೊ. ಕೆ. ಕಿಶೋರಿ ನಾಯಕ್ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವದು ಸಂತಸದ ಸಂಗತಿ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಕೆ.ಕೆ. ಧರ್ಮಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಉಪನಿರ್ದೇಶಕ ಡಾ. ಟಿ. ಕೇಶವಮೂರ್ತಿ ಕ್ರೀಡಾ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ. ಕೆ.ಎಸ್. ಚಂದ್ರಶೇಖರಯ್ಯ, ಸಹಾಯಕ ಪ್ರಾಧ್ಯಾಪಕರಾದ ಡಾ. ಐ.ಕೆ. ಮಂಜುಳಾ, ಬಿ.ಎಸ್. ಶ್ರೀನಾಥ್, ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿ ಗಳು, ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು.