ಮಡಿಕೇರಿ, ಮೇ 8 : ಪ್ರಸಕ್ತ (2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಯು ಈಗಾಗಲೇ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದೆ. ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ತಾ. 10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.