ಮಡಿಕೇರಿ, ಮೇ 8 : ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆ ಸಭಾಂಗಣದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯನ್ನು ಉತ್ತಮವಾಗಿ ಸದುಪಯೋಗ ಪಡಿಸಿಕೊಳ್ಳಲು ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನುಡಿದರು.
ಬಾಲ್ಯದಲ್ಲಿಯೇ ಮಕ್ಕಳ ಬೌದ್ಧಿಕ ಶಕ್ತಿ ಬೆಳೆಯಲು ಇಂತಹ ಶಿಬಿರಗಳು ಉತ್ತಮವಾಗಿರುತ್ತದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಮುಂತಾದ ವಿಷಯಗಳ ಬಗ್ಗೆ ಬೋಧನೆ ಮಾಡಬೇಕಾಗುತ್ತದೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ.
ಜಿ.ಪಂ.ಸಿಇಒ,ಕೆ.ಲಕ್ಷ್ಮಿಪ್ರಿಯ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಉತ್ತಮ ಪ್ರಜೆಗಳು. ಆದ್ದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗೂ ಕಲಿಕೆಗೆ ಪೂರಕವಾಗುವ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿsssಸ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ನೀನಾಸಂ ತಂಡದ ತರಬೇತುದಾರರಾದ ಚೇತನ್, ಸುನಿಲ್ ಇತರರು ಹಾಜರಿದ್ದರು.
ಶಿಬಿರದ ಮಕ್ಕಳಿಂದ ನೃತ್ಯ, ನಾಟಕ, ಸಂಗೀತ ಗಾಯನ, ಕರಾಟೆ, ಯೋಗ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.