ಮಡಿಕೇರಿ, ಮೇ 8: ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೊಡಮಾಡುವ ಪ್ರತಿಷ್ಠಿತ ನಂದಿ ಪ್ರಶಸ್ತಿಗೆ ನಾಗೇಶ್ ಪಾಣತ್ತಲೆ ಭಾಜನರಾಗಿದ್ದಾರೆ.

ಮೈಸೂರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಹಿರಿಯ ಪತ್ರಿಕಾ ಛಾಯಾ ಗ್ರಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಗೇಶ್‍ಗೆ ಉತ್ತಮ ಕ್ರೀಡಾ ಛಾಯಾ ಗ್ರಾಹಕವೆಂದು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಾ. 9 ರಂದು (ಇಂದು) ಮೈಸೂರಿನ ಮಹಾರಾಜ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ನಾಗೇಶ್ ಮಡಿಕೇರಿ ನಿವಾಸಿ ಪಾಣತ್ತಲೆ ಬಿದ್ದಪ್ಪ ಅವರ ಪುತ್ರನಾಗಿದ್ದು, ಈ ಹಿಂದೆ ಜಿಲ್ಲೆಯಲ್ಲಿ ಪತ್ರಕರ್ತನಾಗಿ, ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದರು.