ಸೋಮವಾರಪೇಟೆ, ಮೇ 8 : ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ನಿರ್ದೇಶಕರಾಗಿ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ರಾಜ್ಯ ಹಾಗೂ ರಾಷ್ಟ್ರೀಯ ಮಹಾಸಭಾ ಘಟಕಗಳಿಗೆ ಚುನಾವಣೆ ನಡೆದಿತ್ತು. ರಾಜ್ಯದ ಒಟ್ಟು 9 ಮಹಿಳಾ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಬೆಂಗಳೂರಿನ ವೀರಶೈವ ಮಹಾಸಭಾ ಭವನದಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣನವರು ರಾಜೇಶ್ವರಿಯವರಿಗೆ ಆಯ್ಕೆ ಪ್ರಮಾಣ ಪತ್ರ ವಿತರಿಸಿದರು.