ಸೋಮವಾರಪೇಟೆ, ಮೇ 8: ಜಿಲ್ಲಾ ಶರಣ ಸಾಹಿತ್ಯ ಪರಿಷತ್, ವೀರಶೈವ ಮಹಾಸಭಾದ ವತಿಯಿಂದ ಪಟ್ಟಣದ ಬಸವೇಶ್ವರ ಪ್ರತಿಮೆ ಬಳಿ ಆಯೋಜಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಜೂನಿಯರ್ ಇಂಡಿಯಾ ಹಾಕಿ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುವ ಸೂರ್ಯನನ್ನು ಸನ್ಮಾನಿಸಲಾಯಿತು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸನ್ಮಾನಿಸಿ ಮಾತನಾಡಿ, ಸೋಮವಾರಪೇಟೆಯ ಹಲವಷ್ಟು ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಸೇರಿದಂತೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರುತ್ತಿರುವದು ಶ್ಲಾಘನೀಯ ಎಂದರು.
ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ವಿರಕ್ತ ಮಠಾಧೀಶರಾದ ವಿಶ್ವೇಶ್ವರ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಮಹೇಶ್, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ತಂಗಮ್ಮ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.