ಗೋಣಿಕೊಪ್ಪ ವರದಿ, ಮೇ 10 : ಒಕ್ಕಲಿಗರ ಯುವ ವೇದಿಕೆ ವತಿಯಿಂದ 3ನೇ ವರ್ಷದ ಕ್ರೀಡಾಕೂಟವನ್ನು ತಾ. 11 (ಇಂದು) ತಾ. 12 ರಂದು ನಡೆಸಲಾಗುವದು ಎಂದು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ವಿ. ಎನ್ ಮಹೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ಹಾತೂರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಪುರುಷರಿಗೆ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಹಗ್ಗಜಗ್ಗಾಟ, ಮತ್ತು 15 ವರ್ಷ ಒಳಪಟ್ಟ ಮಕ್ಕಳಿಗೆ ಕ್ರಿಕೆಟ್ ಪಂದ್ಯ, 45 ವರ್ಷ ಮೇಲ್ಪಟ್ಟವರಿಗೆ ಮ್ಯೂಸಿಕಲ್ ಚೇರ್ ಪಂದ್ಯಗಳನ್ನು ಆಯೋಜಿಸಿರುವದಾಗಿ ತಿಳಿಸಿದರು. ಒಟ್ಟು 32 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.