ಕೂಡಿಗೆ, ಮೇ 9: ಕೂಡಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಕನ್ನಿಕಾ ಚೌಡೇಶ್ವರಿ ದೇವಾಲಯದ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು.
ದೇವಿಗೆ ಬೆಳಗಿನಿಂದ ಹೋಮ ಹವನಗಳು ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಮಹಾ ಪೂಜೆಯ ಅಂಗವಾಗಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಅನ್ನದಾನ ನಡೆಯಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.