ಸೋಮವಾರಪೇಟೆ, ಮೇ 9: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ವತಿಯಿಂದ ಇಲ್ಲಿನ ಜೇಸೀ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಸಮಾವೇಶ ಮತ್ತು ಯುಗಾದಿ ಉತ್ಸವದಲ್ಲಿ ತಾಲೂಕಿನ ಮೂವರು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಶ್ರಾವಣಿ, ತೃತೀಯ ಸ್ಥಾನ ಪಡೆದ ಕಶ್ವಿ ಮತ್ತು ಚಿನ್ಮಯ್ ಅವರುಗಳನ್ನು ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭ ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಧರ್ಮಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.